ಇಂದು ರಾತ್ರಿ ಏಳರ ನಂತರ ಮತಗಟ್ಟೆ ಸಮೀಕ್ಷೆ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ನಂತರ ಮತಗಟ್ಟೆ ಸಮೀಕ್ಷೆ ಪ್ರಕಟವಾಗಲಿದೆ.

ಜೂನ್ 1, ಶನಿವಾರ ಸಂಜೆ 7 ಗಂಟೆ ಬಳಿಕ ಮತಗಟ್ಟೆ ಸಮೀಕ್ಷೆಗಳು ಪ್ರಕಟಗೊಳ್ಳಲಿವೆ. ಮತದಾನ ಪೂರ್ಣವಾಗಿ ಮುಗಿಯುವವರೆಗೂ ಮತಗಟ್ಟೆ ಸಮೀಕ್ಷೆಗಳನ್ನು ಪ್ರಕಟಿಸುವಂತಿಲ್ಲ ಎಂಬ ಚುನಾವಣಾ ಆಯೋಗದ ಆದೇಶ ಇದೆ. ಇಂದು ಕೊನೆಯ ಹಂತದ ಮತದಾನ ಇದ್ದು ಮತದಾನದ ನಂತರ ಮತಗಟ್ಟೆ ಸಮೀಕ್ಷೆ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!