ಕರ್ತವ್ಯಕ್ಕೆ ಸಂಕಷ್ಟ ತಂದಿಟ್ಟ ಪೋಸ್ಟ್: ಗುಜರಾತ್ ಚುನಾವಣಾ ಅಧಿಕಾರಿ ವಜಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ಚುನಾವಣಾ ವೀಕ್ಷಕ ಇನ್‌ಸ್ಟಾಗ್ರಾಮ್‌ನಲ್ಲಿ ಮಾಡಿದ ಆ ಒಂದು ಪೋಸ್ಟ್ ಇದೀಗ ಅವರ ಹುದ್ದೆಗೆ ಮುಳುವಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಗುಜರಾತ್ ಚುನಾವಣಾ ವೀಕ್ಷಕ ಅಭಿಷೇಕ್ ಸಿಂಗ್ ತಮ್ಮ ಹುದ್ದೆಯನ್ನು ಸ್ಪಷ್ಟವಾಗಿ ತೋರಿಸಿದ್ದಕ್ಕಾಗಿ ಅಧಿಕಾರಿಯೊಬ್ಬರನ್ನು ಹುದ್ದೆಯಿಂದ ತೆಗೆದಿದ್ದಾರೆ.

ಭಿಷೇಕ್ ಸಿಂಗ್ ಅವರು ತಮ್ಮ ಹುದ್ದೆಯ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು ತಮ್ಮ ಅಧಿಕೃತ ಸ್ಥಾನವನ್ನು ಪ್ರಚಾರ ಪಡೆಯುವುದಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ.

ಉತ್ತರ ಪ್ರದೇಶ ಕೇಡರ್ ಅಧಿಕಾರಿಯಾಗಿರುವ ಅಭಿಷೇಕ್ ಸಿಂಗ್ ಅವರನ್ನು ಅಹಮದಾಬಾದ್‌ನ ಬಾಪುನಗರ ಮತ್ತು ಅಸರ್ವಾ ಎಂಬ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಅವರು ಮಾಡಿದ ಪೋಸ್ಟ್ ಇದೀಗ ಸಂಕಷ್ಟ ತಂದಿಟ್ಟಿದೆ. ಮುಂದಿನ ಆದೇಶದವರೆಗೆ ಯಾವುದೇ ಚುನಾವಣೆ ಸಂಬಂಧಿತ ಕರ್ತವ್ಯದಿಂದ ಅವರನ್ನು ಹೊರಗಿಡಲಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಸಿಂಗ್ ಅವರ ಸ್ಥಾನಕ್ಕೆ ಮತ್ತೊಬ್ಬ ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಕ್ರಿಶನ್ ಬಾಜ್‌ಪೇಯ್ ಅವರನ್ನು ನೇಮಿಸಲಾಗಿದೆ.
ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!