ಹೊಸದಿಗಂತ ವರದಿ ರಾಯಚೂರು:
ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿಯ ಐತಿಹಾಸಿಕ ಪಾದಯಾತ್ರೆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಲಿಂಗಸೂರಿನಿಂದ ಆರಂಭಗೊಂಡಿರುವ ಬಿಜೆಪಿ ಪಾದಯಾತ್ರೆ ಕೇವಲ ರಾಜಕೀಯ ಕಾರ್ಯಕ್ರಮವಲ್ಲ. ಇದು ದಲಿತ ವಿರೋಧಿ, ರೈತ ವಿರೋಧಿ, ಬಡವರ ವಿರೋಧಿ, ಯುವಜನ ವಿರೋಧಿ, ಮಹಿಳಾ ವಿರೋಧಿ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಪ್ರಶ್ನಿಸುತ್ತಿದ್ದಾರೆ. ಡಿಕೆಶಿ ಅವರೇ, ನಿಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರಲ್ಲಿ ಮೂಡಿರುವ ಆಕ್ರೋಶವೇ ಬಿಜೆಪಿ ಪಾದಯಾತ್ರೆಗೆ ಕಾರಣ. ರಾಜ್ಯದ ಜನರ ಹಕ್ಕು, ನ್ಯಾಯ ಮತ್ತು ಭವಿಷ್ಯಕ್ಕಾಗಿ ನಾವು ಬೀದಿಗಿಳಿದಿದ್ದೇವೆ ಎಂದು ವಿಜಯೇಂದ್ರ ಹೇಳಿದರು.
ಇದನ್ನೂ ಓದಿ:
ಭ್ರಷ್ಟಾಚಾರವನ್ನು ರಕ್ಷಿಸುವ ಸರ್ಕಾರವನ್ನು ಕಿತ್ತೊಗೆಯುವವರೆಗೂ ಬಿಜೆಪಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.



