ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿಗೆ ಆಗಮಿಸಿದ ಗಯಾನ ದೇಶದ ರಾಷ್ಟ್ರಪತಿ ಡಾ. ಮೊಹಮ್ಮದ್ ಇರ್ಫನ್ ಅಲಿ ಅವರು ಶುಕ್ರವಾರ ಸಂಜೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಯಾನದ ದೇಶದ ರಾಷ್ಟ್ರಪತಿಗಳನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಅವರು ರಾಜ್ಯ ಸರಕಾರದ ಪರವಾಗಿ ಪುಷ್ಪಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಅಪರ ಮುಖ್ಯ ಕಾರ್ಯದರ್ಶಿಗಳಾದ ರಜನೀಶ್ ಗೋಯಲ್, ಬೆಂಗಳೂರು ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಗಳಾದ ಪಿ. ಹೇಮಲತಾ ಅವರು ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಇಂದೋರಿನಲ್ಲಿ ನಡೆದ 17ನೇ ಪ್ರವಾಸಿ ಭಾರತೀಯ ದಿವಸದ ಮುಖ್ಯ ಅತಿಥಿಯಾಗಿ ಗಯಾನಾದ ಅಧ್ಯಕ್ಷರಾದ ಮೊಹಮ್ಮದ್ ಇರ್ಫಾನ್ ಅಲಿ ಭಾಗವಹಿಸಿದ್ದರು.
ಏಳು ದಿನಗಳ ಭಾರತದ ಭೇಟಿ ವೇಳೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಾದ – ಆಗ್ರಾ, ಹೊಸದಿಲ್ಲಿ, ಕಾನ್ಪುರ್ ಮತ್ತು ಮುಂಬೈ ನಗರಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ.