ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತಕ್ಕೆ ಪ್ರವಾಸ ಕೈಗೊಂಡಿರುವ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರಿಗೆ ಇಂದು ದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಸಾಂಪ್ರದಾಯಿಕ ಸ್ವಾಗತವನ್ನು ನೀಡಲಾಯಿತು.
ರಾಷ್ಟ್ರಪತಿ ಭವನದಲ್ಲಿ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು.
ಶ್ರೀಲಂಕಾ ಅಧ್ಯಕ್ಷ ದಿಸಾನಾಯಕ ಅವರಿಗೆ ರಕ್ಷಣಾ ಪಡೆಗಳಿಂದ ಗಾರ್ಡ್ ಆಫ್ ಹಾನರ್ ಅನ್ನು ನೀಡಲಾಯಿತು.
ಸೆಪ್ಟೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ದಿಸಾನಾಯಕೆ ಅವರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ.