ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಮಹಿಂದಾ ರಾಜಪಕ್ಸ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾದಲ್ಲಿ ತಲೆದೋರಿರುವ ಆರ್ಥಿಕ ಸಂಕಷ್ಟ ನೀಗಿಸುವಲ್ಲಿ ವಿಫಲವಾದ ಕಾರಣ ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಮಹಿಂದಾ ರಾಜಪಕ್ಸ ಅವರ ಬಳಿ ಮನವಿ ಮಾಡಿದ್ದರು. ಇದಕ್ಕೆ ಮಹಿಂದಾ ರಾಜಪಕ್ಸ ಸಮ್ಮತಿ ಸೂಚಿಸಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!