Thursday, September 21, 2023

Latest Posts

G20 ಶೃಂಗಸಭೆ ಮುನ್ನ ವಿದೇಶ ಹೊರಟ ಪ್ರಧಾನಿ ಪ್ರಧಾನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

G20 ಶೃಂಗಸಭೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ (Indonesia) ಅಧ್ಯಕ್ಷ ಜೋಕೊ ವಿಡೋಡೊ (Joko Widodo) ಅವರ ಭೇಟಿ ನೀಡಲಿದ್ದಾರೆ.

ನರೇಂದ್ರ ಮೋದಿ (Narendra Modi) ಸೆಪ್ಟೆಂಬರ್ 6 ಮತ್ತು 7 ರಂದು ಇಂಡೋನೇಷ್ಯಾದ ಜಕಾರ್ತಕ್ಕೆಭೇಟಿ ನೀಡಲಿದ್ದಾರೆ.

ಭಾರತದ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ (G20 Summit) ಮುನ್ನ ಪ್ರಧಾನಿ ಮೋದಿ ಅವರ ಇಂಡೋನೇಷ್ಯಾ ಭೇಟಿ ನೀಡುತ್ತಿದ್ದಾರೆ. ಇಂಡೋನೇಷ್ಯಾ ಜಿ20 ಭಾಗವಾಗಿದೆ ಮತ್ತು ಕಳೆದ ವರ್ಷ ಜಿ20 ಗುಂಪಿನ ಅಧ್ಯಕ್ಷ ಸ್ಥಾನವನ್ನು ಹೊಂದಿತ್ತು.

ಪೂರ್ವ ಏಷ್ಯಾ ಶೃಂಗಸಭೆಯು ಆಸಿಯಾನ್ ದೇಶಗಳ ನಾಯಕರು ಮತ್ತು ಭಾರತ ಸೇರಿದಂತೆ ಅದರ ಎಂಟು ಸಂವಾದ ಪಾಲುದಾರರಿಗೆ ಪ್ರಾದೇಶಿಕ ಮತ್ತು ಜಾಗತಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!