July 11, 2026
Saturday, July 11, 2026
spot_img

ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ, ಎದ್ದುನಿಂತು ಚಪ್ಪಾಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಜವಾಹರ್‌ಲಾಲ್‌ ನೆಹರೂ ಅವರ ಆಡಳಿತ ಅವಧಿಯ ದಾಖಲೆಯನ್ನು ಪ್ರಧಾನಿ ಮೋದಿ ಮುರಿದಿದ್ದಾರೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿಅಭಿನಂದನಾ ನಿರ್ಣಯವನ್ನು ಅಂಗೀಕರಿಸಿದ್ದು, ಸಂಪುಟ ಸಹೋದ್ಯೋಗಿಗಳು ಮೋದಿಗೆ ಎದ್ದುನಿಂತು ಚಪ್ಪಾಳೆ ಹೊಡೆಯುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನ ಮುರಿದು 4,399 ದಿನಗಳ ನಿರಂತರ ಸೇವೆಯ ಮೈಲುಗಲ್ಲು ತಲುಪಿದ್ದಾರೆ.

2014ರ ಮೇ 26ರಂದು ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕರಿಸಿದ್ದರು. ಇಂದಿಗೆ 4,399 ದಿನಗಳ ನಿರಂತರ ಅಧಿಕಾರಾವಧಿಯನ್ನು ಪೂರೈಸಿದ್ದಾರೆ. ರಾಜ್ಯದ ಹಲವು ಕಡೆ ಪ್ರಧಾನಿ ಅವರ ಈ ಸಾಧನೆಯನ್ನು ಶ್ಲಾಘಿಸಲಾಗಿದೆ. ಪೂಜೆ, ಹೋಮ ಹವನಗಳು, ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !