ಪ್ರಧಾನಿಯವರ ‘ಪರೀಕ್ಷಾ ಪೇ ಚರ್ಚಾ’ ಸಂವಾದ: ಕೊಡಗಿನ ಪದ್ಮಪ್ರಿಯಾಗೆ ಅವಕಾಶ

ಹೊಸ ದಿಗಂತ ವರದಿ,ಮಡಿಕೇರಿ:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 1 ರಂದು ಬೆಳಗ್ಗೆ 11 ಗಂಟೆಗೆ ಆನ್’ಲೈನ್/ವರ್ಚುವಲ್ ಮೂಲಕ 5 ನೇ ಆವೃತ್ತಿಯ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದು, ಕೊಡಗು ಜಿಲ್ಲೆಯ ಕೇಂದ್ರೀಯ ವಿದ್ಯಾಲಯದ ಪದ್ಮಪ್ರಿಯಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದಾರೆ ಎಂದು ಹೇಳಿದರು.
ಪರೀಕ್ಷಾ ಪೇ ಚರ್ಚಾ ಸಂವಾದವು ಬಹು ನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರೀಕ್ಷೆಯ ಒತ್ತಡ ಮತ್ತು ಇತರ ಪ್ರಶ್ನೆಗಳಿಗೆ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಉತ್ತರಿಸಲಿದ್ದಾರೆ ಎಂದು ಡಾ.ಬಿ.ಸತೀಶ ಅವರು ವಿವರಿಸಿದರು.
ದೇಶದಾದ್ಯಂತ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮ ಪ್ರಸಾರವಾಗಲಿದ್ದು, ದೂರದರ್ಶನ, ರೇಡಿಯೋ, ಟಿ.ವಿ ಚಾನಲ್‍ಗಳು, ಯೂಟ್ಯೂಬ್ ಚಾನಲ್‍ಗಳು ಸೇರಿದಂತೆ ಡಿಜಿಟಲ್ ಚಾನಲ್‍ಗಳಲ್ಲಿ ಈ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾಗಿದೆ ಎಂದರು.
ಮಕ್ಕಳಲ್ಲಿ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆ ಸಂಬಂಧಿಸಿದಂತೆ ಹುರಿದುಂಬಿಸುವಲ್ಲಿ ಮತ್ತು ಪ್ರೋತ್ಸಾಹಿಸುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಆನ್‍ಲೈನ್ ಮೂಲಕ ನಡೆಯುವ ಸಂವಾದ ಕಾರ್ಯಕ್ರಮ ವೀಕ್ಷಿಸಲು ನಗರದ ಕೇಂದ್ರೀಯ ವಿದ್ಯಾಲಯ ಮತ್ತು ನವೋದಯ ವಿದ್ಯಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ, ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಅರ್ಜುನ್ ಸಿಂಗ್, ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲ ಪಂಕಜಾಕ್ಷನ್ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!