ಹೊಸದಿಗಂತ ವರದಿ,ಶಿವಮೊಗ್ಗ:
ಸಾಗರದ ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಬುಧವಾರ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪದವಿ ಕಾಲೇಜಿನಲ್ಲಿ ಪೂರ್ಣಕಾಲಿಕ ಪ್ರಾಧ್ಯಾಪಕರ ಕೊರತೆ ಇದ್ದು, ಬಹುತೇಕ ಅತಿಥಿ ಉಪನ್ಯಾಸಕರೆ ಪಾಠ ನಿರ್ವಹಿಸುತ್ತಿದ್ದಾರೆ. ಡಿ.10ರಿಂದ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತರಗತಿಗಳನ್ನು ಬಹಿಷ್ಕರಿಸಿ ಮುಷ್ಕರ ಕೈಗೊಂಡಿದ್ದಾರೆ. ಆದ್ದರಿಂದ ಪದವಿ ತರಗತಿಗಳು ನಡೆಯುತ್ತಿಲ್ಲ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.