Monday, October 2, 2023

Latest Posts

ಅಡೆ-ತಡೆ ಮೀರಿ ಈದ್ಗಾ ಮೈದಾನದಲ್ಲಿ ವಿಘ್ನೇಶ್ವರನ ಪ್ರತಿಷ್ಟಾಪನೆ, ಮೂರುಸಾವಿರ ಮಠದಿಂದ ಮೆರವಣಿಗೆ

ಹೊಸದಿಗಂತ ವರದಿಹುಬ್ಬಳ್ಳಿ: 

ನಗರದ ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆಯಾಗಲಿರುವ ಗಣೇಶಮೂರ್ತಿ ಮೆರವಣಿಗೆ ಮೂರುಸಾವಿರ ಮಠದ ಆವರಣದಿಂದ ಆರಂಭವಾಗಿದೆ.

ಮೆರವಣಿಗೆ ಮಹಾವೀರಗಲ್ಲಿ, ತುಳಜಾಭವಾನಿ ವೃತ್ತ, ದಾಜೀಬಾನ್ ಪೇಟೆ, ಅಂಚಟಗೇರಿ ಓಣಿ ಮುಖಾಂತರ ರಾಯಣ್ಣ ವೃತ್ತಕ್ಕೆ ಬಂದು ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಪಂಚವಾದ್ಯ, ಡೋಲು, ಜಾಂಝ್ ಮೇಳಗಳು ಪಾಲ್ಗೊಂಡಿವೆ.

ಭಾರತ ಮಾತೆಯ ಆಳೆತ್ತರದ ಭಾವಚಿತ್ರ, ಭಗವಧ್ವಜ, ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ಬಿಜೆಪಿ, ಆರ್‌ಎಸ್ಎಸ್, ಹಿಂದೂ ಜಾಗರಣ ವೇದಿಕೆ,‌ ಶ್ರೀರಾಮ ಸೇನೆ, ವಿ‌ಎಚ್.ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಂಡಿದ್ದಾರೆ.

ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಡಿಸಿಪಿ ರಾಜೀವ್ ಎಂ. ನೇತೃತ್ವ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ‌. ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ, ಸಿಎಆರ್ ತುಕಡಿಗಳು ಪಾಲ್ಗೊಂಡಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!