July 24, 2026
Friday, July 24, 2026
spot_img

ಕೈಕೊಟ್ಟ ಮಳೆರಾಯ, ತಳ ಮುಟ್ಟಿದ ಕೆಆರ್‌ಎಸ್; ಕೃಷಿಗೆ ನೀರಿಲ್ಲದೆ ಸ್ತಬ್ಧಗೊಂಡ ಬಿತ್ತನೆ ಕಾರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಜೀವನಾಡಿಯಾದ ಕೃಷ್ಣರಾಜಸಾಗರ (KRS) ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿದಿರುವುದರಿಂದ ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ.

ಪ್ರಸ್ತುತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಲ್ಲಿ ಬರಗಾಲದ ಛಾಯೆ ಆವರಿಸಿದೆ. ಕೃಷಿ ಭೂಮಿಗೆ ನೀರಿಲ್ಲದೆ ರೈತರು ಈ ಬಾರಿ ಬಿತ್ತನೆ ಕಾರ್ಯವನ್ನು ಆರಂಭಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ಬರ ಪೀಡಿತ ಘೋಷಣೆಗೆ ಆಗ್ರಹ:

ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಬರೋಬ್ಬರಿ ಶೇಕಡಾ 83 ರಷ್ಟು ಮಳೆ ಕೊರತೆ ಎದುರಾಗಿದೆ. ಇದರಿಂದಾಗಿ ಕೃಷಿ ಅವಲಂಬಿತ ಲಕ್ಷಾಂತರ ಕುಟುಂಬಗಳ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ಮಳೆ ಮತ್ತು ಕೃಷಿ ನೀರಿಲ್ಲದೆ ಕಂಗಾಲಾಗಿರುವ ರೈತರು, ಮಂಡ್ಯ ಜಿಲ್ಲೆಯನ್ನು ತಕ್ಷಣವೇ ‘ಬರ ಪೀಡಿತ ಜಿಲ್ಲೆ’ ಎಂದು ಘೋಷಿಸಬೇಕು ಹಾಗೂ ರೈತರಿಗೆ ವಿಶೇಷ ನಷ್ಟ ಪರಿಹಾರ ಪ್ಯಾಕೇಜ್ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಆಗ್ರಹ ಹೂಡಿದ್ದಾರೆ.

ಇದನ್ನೂ ಓದಿ:

ಕುಡಿಯುವ ನೀರಿಗೂ ತತ್ವಾರ:

ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ತಳ ಮುಟ್ಟುತ್ತಿರುವುದರಿಂದ ಕೇವಲ ಕೃಷಿ ಮಾತ್ರವಲ್ಲದೆ, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೂ ಭೀಕರ ಆಹಾಕಾರ ಸೃಷ್ಟಿಯಾಗುವ ಆತಂಕ ಎದುರಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !