ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ ಬಾರಿಯಂತೆ ಈ ಸಲವೂ ಬಿಹಾರದ ಜನತೆ ದೇಶಕ್ಕೆ ಹೊಸ ದಿಕ್ಕನ್ನು ತೋರಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಟ್ನಾದಲ್ಲಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿ, ಬಿಹಾರದ ಮಹಾಘಟಬಂಧನ ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ದಲಿತ, ಮಹಿಳೆ ಹಾಗೂ ಆರ್ಥಿಕವಾಗಿ ಹಿಂದುಳಿದವರ ಏಳಿಗೆಗಾಗಿ ಕೆಲಸ ಮಾಡಲಿದೆ ಎಂದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಮೇಲೆ ಇರುವ ಶೇ 50ರ ‘ಹುಸಿ ಮಿತಿ’ಯನ್ನು ತೆಗೆದು ಹಾಕುತ್ತೇವೆ. ತೆಲಂಗಾಣದಲ್ಲಿ ಮಾಡಿದಂಥ ಜಾತಿ ಗಣತಿ ಇಡೀ ದೇಶದ ಅಭಿವೃದ್ಧಿಯ ಚಹರೆಯನ್ನೇ ಬದಲಿಸಲಿದೆ ಎಂದಿದ್ದಾರೆ.