ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ವಿಶಿಷ್ಟ ಮತ್ತು ಐತಿಹಾಸಿಕ ಚಳವಳಿ ಎಂದು ರಾಜಸ್ಥಾನದ ಆರೋಗ್ಯ ಸಚಿವ ಪರ್ಸಾದಿ ಲಾಲ್ ಮೀನಾ ತಿಳಿಸಿದ್ದಾರೆ.
ಭಗವಾನ್ ರಾಮ ಅಯೋಧ್ಯೆಯಿಂದ ಶ್ರೀಲಂಕಾದವರೆಗೆ ಪಾದಯಾತ್ರೆ ನಡೆಸಿದ್ದರು. ಅವರಿಗಿಂತ ರಾಹುಲ್ ನಡೆಸುತ್ತಿರುವ ಕಾಂಗ್ರೆಸ್ ಯಾತ್ರೆ ತುಂಬಾ ದೊಡ್ಡದಾಗಿದೆ ಎಂದು ಮೀನಾ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಇಂತಹ ಮುಖಸ್ತುತಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಈ ಹೇಳಿಕೆಯನ್ನು ಟೀಕಿಸಿದೆ.