ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮರು ಗಣತಿ ನಡೆಸುವ ಸೂಚನೆಯ್ನು ಹೈಕಮಾಂಡ್ ನೀಡಿದ್ದು, ಇದು ನನ್ನ ತೀರ್ಮಾನವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಪಪಡಿಸಿದ್ದಾರೆ.
ಜಾತಿಗಣತಿ ನಡೆಸುವ ವಿಚಾರ ಹೈಕಮಾಂಡ್ ಸೂಚನೆ ಕೊಟ್ಟಿದೆ. ಅದರಂತೆ ಸರ್ಕಾರ ರಾಜ್ಯದಲ್ಲಿ ಹೊಸದಾಗಿ ಜಾತಿಗಣತಿ ನಡೆಸಲಿದೆ ಎಂದು ಹೇಳಿದರು. ಜಾತಿ ಗಣತಿ ನಡೆದಿದ್ದು 2015ರಲ್ಲಿ. ಈಗ 10 ವರ್ಷಗಳಾಗಿವೆ. ಆದ್ದರಿಂದ ಮರು ಸಮೀಕ್ಷೆ ನಡೆಸುವಂತೆ ನಿರ್ದೇಶನ ನೀಡಿದೆ. ಕಾಂತರಾಜು ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಿದ್ದು, ವರದಿಯನ್ನು ಪೂರ್ಣವಾಗಿ ಕಡೆಗಣಿಸಿಲ್ಲ. ಕೆಲವು ಬದಲಾವಣೆಗಳೊಂದಿಗೆ 60ರಿಂದ 70 ದಿನಗಳಲ್ಲಿ ಮರು ಸಮೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದರು.