ಮೈಕ್ರೋಸಾಫ್ಟ್​ ಸರ್ವರ್ ಸಮಸ್ಯೆಗೆ ಬಯಲಾಯ್ತು ಅಸಲಿ ಕಾರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಕ್ರೋಸಾಫ್ಟ್ ಸರ್ವರ್‌ಗಳೊಂದಿಗೆ ಸಂಭವಿಸಿದ ಸಮಸ್ಯೆಯಿಂದಾಗಿ ಜಾಗತಿಕ ತಾಂತ್ರಿಕ ಬಿಕ್ಕಟ್ಟು ಉದ್ಭವಿಸಿದೆ. ಈ ಸಮಸ್ಯೆಯ ಕಾರಣದ ಬಗ್ಗೆ ಇದೀಗ ಮಾಹಿತಿ ಲಭ್ಯವಾಗಿದೆ. ಕ್ಲೌಡ್ ಸ್ಟ್ರೈಕ್ ಆ್ಯಂಟಿ-ವೈರಸ್ ಅನ್ನು ನವೀಕರಿಸಬೇಕಾಗಿದೆ. ಕಂಪನಿಯು ಮಾಹಿತಿಯನ್ನು ಸಮಯೋಚಿತವಾಗಿ ನವೀಕರಿಸಲು ವಿಫಲವಾಗಿದೆ. ಹೀಗಾಗಿ, ಮೈಕ್ರೋಸಾಫ್ಟ್-ಸಂಯೋಜಿತ ಸೈಬರ್ ಸೆಕ್ಯುರಿಟಿ ಕಂಪನಿ ಪ್ರಕಾರ, ಜಗತ್ತು ಐಟಿ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣವೂ ಸರ್ವರ್ ಸ್ಥಗಿತದ ಬಗ್ಗೆ ಹೇಳಿಕೆ ನೀಡಿದೆ. ಐಟಿ ಬಿಕ್ಕಟ್ಟಿನಿಂದಾಗಿ ವಿಮಾನ ಪ್ರಯಾಣದ ಮೇಲೆ ಪರಿಣಾಮ ಬೀರಿದ್ದು, ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಪ್ರಯತ್ನಿಸಲಾಗುತ್ತಿದೆ.

ಈ ಸಮಸ್ಯೆಯು ಮೊದಲು ಅಮೆರಿಕದ ಫ್ರಾಂಟಿಯರ್ ಏರ್‌ಲೈನ್ಸ್‌ನಲ್ಲಿ ಕಾಣಿಸಿಕೊಂಡಿತು ಮತ್ತು ಕ್ರಮೇಣ ಪ್ರಪಂಚದಾದ್ಯಂತ ಹರಡಿತು. ದೆಹಲಿ, ಮುಂಬೈ ಸೇರಿದಂತೆ ಹಲವು ದೇಶಗಳಲ್ಲಿ ವಿಮಾನ ಸಂಚಾರಕ್ಕೂ ತೊಂದರೆಯಾಗಿದೆ. ವಿಮಾನಯಾನ ಸಂಸ್ಥೆಗಳು, ಬ್ಯಾಂಕ್‌ಗಳು, ಮಾಧ್ಯಮಗಳು ಮತ್ತು ಹಣಕಾಸು ಸಂಸ್ಥೆಗಳು ಗೊಂದಲದಲ್ಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!