ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಂಟಕವಾಗಿದ್ದ ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ, ಜಿಲ್ಲಾಧ್ಯಕ್ಷ ಹುದ್ದೆಯ ಭರವಸೆಯ ನಂತರ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಟಿಕೆಟ್ ನ ಪ್ರಭಲ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಟಿಕೆಟ್ ಸಿಗದೇ ಅಸಮಾಧಾನದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು.
ಆದರೇ ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನ ಸೋಮವಾರ, ಉಡುಪಿಗೆ ಆಗಮಿಸಿದ್ದ ಡಿ.ಕೆ.ಶಿವಕುಮಾರ್ ಅವರು ಕೃಷ್ಣಮೂರ್ತಿ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕೃಷ್ಣಮೂರ್ತಿ ಅವರು ಜಿಲ್ಲಾಧ್ಯಕ್ಷ ಸ್ಥಾನದ ಬೇಡಿಕೆ ಇಟ್ಟಿದ್ದು, ಅದಕ್ಕೆ ಡಿಕೆಶಿ ಒಪ್ಪಿದ್ದಾರೆ.
ಸಂಜೆ ಸಾರ್ವಜನಿಕ ಸಭೆಗೆ ತಮ್ಮ ಬೆಂಬಲಿಗರೊಂದಿಗೆ ಬಂದ ಕೃಷ್ಣಮೂರ್ತಿ ಅವರನ್ನು ಸ್ವತಃ ಡಿಕೆಶಿ ಅವರೇ ವೇದಿಕೆಗೆ ಆಹ್ವಾನಿಸಿ ಹೂಗುಚ್ಚ ನೀಡಿ ಅಭಿನಂದಿಸಿದರು. ಪಕ್ಷದ ಅಭ್ಯರ್ಥಿ ಪ್ರಸಾದ್ ರಾಜ್ ಅವರು ಕೃಷ್ಣಮೂರ್ತಿ ಅವರನ್ನು ಆಲಂಗಿಸಿ ಕೃತಜ್ಞತೆ ಸಲ್ಲಿಸಿದರು.