ಕೇಂದ್ರ ಸರ್ಕಾರದ ಪ್ರಯತ್ನದ ಫಲ: 5 ವರ್ಷಗಳ ಬಳಿಕ ಕೈಲಾಸ ಮಾನಸ ಸರೋವರ ಯಾತ್ರೆಗೆ ಸಿಕ್ಕಿಂನಲ್ಲಿ ಹಸಿರು ನಿಶಾನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೈಲಾಸ ಮಾನಸ ಸರೋವರ ಯಾತ್ರೆಗೆ ಸಿಕ್ಕಿಂನಲ್ಲಿ ಇಂದು ಚಾಲನೆ ನೀಡಲಾಗಿದ್ದು, ರಾಜ್ಯಪಾಲ ಓಂ ಪ್ರಕಾಶ್ ಮಾಥೂರ್ ಯಾತ್ರೆಯ ಮೊದಲ ತಂಡಕ್ಕೆ ಹಸಿರು ನಿಶಾನೆ ತೋರಿದರು.ಬಳಿಕ ಅವರು, ಕೈಲಾಸ ಮಾನಸ ಸರೋವರ ಶ್ರದ್ಧೆಯ ಕೇಂದ್ರವಾಗಿದ್ದು, ಕೇಂದ್ರ ಸರ್ಕಾರದ ಪ್ರಯತ್ನದ ಫಲವಾಗಿ 5 ವರ್ಷಗಳ ಬಳಿಕ ಯಾತ್ರೆ ಪುನರಾರಂಭಗೊಂಡಿದೆ ಎಂದು ತಿಳಿಸಿದರು.

ಯಾತ್ರೆಯ ಕುರಿತು ಇಂಡೋ ಟಿಬೇಟನ್ ಬಾರ್ಡರ್ ಪೊಲೀಸ್ ಪಡೆಯ ವೈದ್ಯಾಧಿಕಾರಿ, ಯಾತ್ರಿಕರ ಆರೋಗ್ಯ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಿರಂತರವಾಗಿ ವೈದ್ಯರ ಸೇವೆ ದೊರೆಯಲಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!