ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜಪೇಟೆಯ ಮೈದಾನದಲ್ಲಿ ಧಾರ್ಮಿಕ ಅಚರಣೆ, ಉತ್ಸವಗಳಿಗೆ ಅನುಮತಿ ನೀಡುವುದು ಬಿಡುವುದನ್ನು ಕಂದಾಯ ಇಲಾಖೆ ನೋಡಿಕೊಳ್ಳುತ್ತದೆ ಎಂದು ಎಂದು ಸಚಿವ ಆರ್ ಅಶೋಕ್ ಸ್ಪಚ್ಟಪಡಿಸಿದ್ದಾರೆ.
ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಅದು ಕಂದಾಯ ಇಲಾಖೆಯ ಆಸ್ತಿ, ಅಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲು ಇದುವರೆಗೂ ಯಾವುದೇ ಮನವಿ ಬಂದಿಲ್ಲ. ಮನವಿ ಬಂದರೆ ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸಿ ತೀರ್ಮಾನ ಮಾಡಲಾಗುವುದು ಎಂದರು.
ಸ್ವಾತಂತ್ರ್ಯೋತ್ಸವ ದಿನ ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿ ಬೇಕಿಲ್ಲ. ಆದರೆ ಕಾನೂನು ಸುವ್ಯವಸ್ಥೆ ಗೊಂದಲ ಇರುವ ಕಡೆ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಹಾರಿಸಲು ಅನುಮತಿ ಬೇಕಾಗುತ್ತದೆ. ಚಾಮರಾಜಪೇಟೆ ಮೈದಾನದಲ್ಲಿನ ಆಚರಣೆ ಸಂಬಂಧ ಸರ್ಕಾರ ಸೂಕ್ತ ತೀರ್ಮಾನ ಮಾಡುತ್ತದೆ ಎಂದರು.