ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂಬತ್ತನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ. ಭಾರತ ತಂಡ ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ. ಪಂದ್ಯಾವಳಿ ಅಕ್ಟೋಬರ್ 3 ರಿಂದ 20 ರವರೆಗೆ ನಡೆಯಲಿದೆ. ದುಬೈ ಮತ್ತು ಶಾರ್ಜಾದಲ್ಲಿ ಒಟ್ಟಾರೆ 23 ಪಂದ್ಯಗಳು ನಡೆಯಲಿದ್ದು, ಒಟ್ಟಾರೆ 19ದಿನ ಪಂದ್ಯಾವಳಿಗಳು ನಡೆಯಲಿದೆ.
ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತದ ಮಹಿಳಾ ತಂಡ ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದೆ. ಅಕ್ಟೋಬರ್ 13 ರಂದು ಆರು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾದ ವಿರುದ್ಧ ಆಡಲಿದೆ. ಒಂದು ಪಂದ್ಯ ಕ್ವಾಲಿಫೈಯರ್ನಲ್ಲಿ ಗೆದ್ದು ಬಂದ ತಂಡದ ವಿರುದ್ಧ ಆಡಲಿದೆ. ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.
ಭಾರತ ತಂಡ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಮತ್ತು ಪಾಕಿಸ್ತಾನ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ವರ್ಷದ ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ಟೂರ್ನಿ ನಡೆಯಲಿದೆ. ಸಿಲ್ಹೆಟ್ನಲ್ಲಿ ತಮ್ಮ ಎಲ್ಲಾ ಗುಂಪು ಪಂದ್ಯಗಳು ನಡೆಯಲಿದ್ದು, ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.