ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸಹ ಸವಾರ ಸಾವು

ಹೊಸ ದಿಗಂತ ವರದಿ, ಮೈಸೂರು:

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಹಿಂಬದಿ ಸವಾರ ಸಾವಿಗೀಡಾದ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಕ್ಕಬೀಚನಹಳ್ಳಿ ಗ್ರಾಮದ ಬಳಿ ನಡೆದಿದೆ. ಸಿಂಡೇನಹಳ್ಳಿ ಗ್ರಾಮದ ಮಂಜು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಪ್ರೇಮ್ ಕುಮಾರ್‌ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಸವಾರ ಪ್ರೇಮ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಮೃತ ಮಂಜು ಪತ್ನಿ ನಾಗಮ್ಮ ನೀಡಿದ ದೂರಿನ ಮೇಲೆ ಬಿಳಿಕೆರೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!