ಹೊಸ ದಿಗಂತ ವರದಿ, ಮಂಡ್ಯ :
ಮಳವಳ್ಳಿ ತಾಲೂಕು ಹಲಗೂರು ಸಮೀಪದ ಬೆನಮನಹಳ್ಳಿ ಬಳಿ ರಸ್ತೆಯಲ್ಲಿ ಕಾಡು ಪ್ರಾಣಿ ಅಡ್ಡ ಬಂದ ಸಂದರ್ಭದಲ್ಲಿ ಅದನ್ನು ತಪ್ಪಿಸಲು ಹೋಗಿ ಆಯಾ ತಪ್ಪಿ ರಸ್ತೆಯ ಬದಿಯಲ್ಲಿ ಬಿದ್ದ ಪರಿಣಾಮ ತೀವ್ರ ಗಾಯಗೊಂಡು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೂಲತಃ ಹಲಗೂರಿನ ಮುಸ್ಲಿಂ ಬ್ಲಾಕ್ ನಿವಾಸಿ ಅಪ್ಜಲ್ ಪಾಷಾ ರವರ ಪುತ್ರ ಮುಹೀದ್ ಪಾಷಾ(25) ಬೆನಮನಹಳ್ಳಿ ಗ್ರಾಮದಿಂದ ಹಲಗೂರು ಕಡೆಗೆ ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಕಾಡು ಪ್ರಾಣಿ ಅಡ್ಡ ಬಂದು ಕಾರಣ ಅದನ್ನು ತಪ್ಪಿಸಲು ಹೋಗಿ ಆಯಾ ತಪ್ಪಿ ರಸ್ತೆ ಬದಿಯಲ್ಲಿದ ಕಲ್ಲಿಗೆ ಡಿಕ್ಕಿ ಹೊಡೆದುಬಿದ್ದ ಪರಿಣಾಮವಾಗಿ ತೀವ್ರ ಗಾಯಗೊಂಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಸಂಬಂಧ ಹಲಗೂರು ಪೋಲಿಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಬಿ.ಮಹೇಂದ್ರ ಕೇಸು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.