ಮೈಸೂರಿಗೆ ಸ್ವಚ್ಚ ನಗರಿ ಗೌರವ ಲಭಿಸುವಲ್ಲಿ ಪೌರಕಾರ್ಮಿಕರು, ಅಧಿಕಾರಿಗಳು, ಸಾರ್ವಜನಿಕರ ಪಾತ್ರ ಅಪಾರ; ಸಚಿವ ಎಸ್.ಟಿ.ಸೋಮಶೇಖರ್

ಹೊಸದಿಗಂತ ವರದಿ ಮೈಸೂರು:

ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೆ ಸ್ವಚ್ಛತೆ ನಗರ ಎಂಬ ಗೌರವ ಲಭ್ಯಿಸಿದೆ. ಪೌರಕಾರ್ಮಿಕರು, ಅಧಿಕಾರಿಗಳ ಶ್ರಮ ಹಾಗೂ ಸಾರ್ವಜನಿಕರ ಸಹಕಾರದಿಂದ ಸ್ವಚ್ಛ ಸರ್ವೇಕ್ಷಣೆಯಲ್ಲಿ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು ನಗರ ಎರಡನೇ ಸ್ಥಾನ ಪಡೆದಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಭಾನುವಾರ ಬೆಳಗ್ಗೆ ಮೈಸೂರಿನಚಾಮುಂಡಿ ಬೆಟ್ಟದಲ್ಲಿ ಹೆಚ್.ವಿ‌.ರಾಜೀವ್ ಸ್ನೇಹಬಳಗ ಹಾಗೂ ಇತರೆ ಸಂಘಟನೆಗಳು ಹಮ್ಮಿಕೊಂಡಿದ್ದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಮೈಸೂರು ನಗರ ಪ್ರಥಮ ಸ್ಥಾನಕ್ಕೇರಲಿದೆ. ಪೌರಕಾರ್ಮಿಕರು ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ ಮೂರು ಗಂಟೆಯವರೆಗೆ ಸ್ವಚ್ಚತಾ ಕಾರ್ಯ ಮಾಡುತ್ತಿದ್ದಾರೆ. ಇದರ ಜೊತೆಗೆ ನಾನಾ ಸಂಘಟನೆಗಳು ಕೂಡ ಸ್ವಚ್ಚತಾ ಕಾರ್ಯಕ್ಕೆ ಕೈಜೋಡಿಸಿದ್ದು ಅವರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಮಾತನಾಡಿ, ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!