Monday, August 8, 2022

Latest Posts

ಇಂದಿನ‌ ಜೀವನ ಶೈಲಿಯೇ ಅಪೌಷ್ಟಿಕತೆಗೆ ಮೂಲ ಕಾರಣ: ಎನ್. ಸುಬ್ರಹ್ಮಣ್ಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ಇಂದಿನ ದಿನಗಳಲ್ಲಿ ಜೀವನ ಶೈಲಿ ಮತ್ತು ಆಹಾರ ಕ್ರಮಗಳೇ ಅಪೌಷ್ಟಿಕತೆಗೆ ಮೂಲ ಕಾರಣ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಹ್ಮಣ್ಯ ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪೌಷ್ಠಿಕಾಂಶ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದಿನ ಕಾಲದಲ್ಲಿ ಯಾವುದೇ ರಾಸಾಯನಿಕಗಳಿಲ್ಲದೆ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದರು. ಆದ್ದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳಾಗಲಿ, ಅಪೌಷ್ಟಿಕತೆಯಾಗಲೀ ನಮ್ಮ ತಲೆಮಾರಿನಲ್ಲಿ ಕಡಿಮೆ ಇತ್ತು, ಆದರೆ ಇಂದಿನ ಬದಲಾದ ಜೀವನ ಶೈಲಿ ಆಹಾರ ಕ್ರಮ ಹಾಗೂ ರಾಸಾಯನಿಕಗಳ ಬಳಕೆಯಿಂದ ಈ ತಲೆಮಾರಿನ ಎಲ್ಲರಿಗೂ ಅಪೌಷ್ಟಿಕತೆ ಕಾಡುತ್ತಿದೆ ಎಂದರು.
ತಾಯಂದಿರು ಮಗುವಿಗೆ ಜನ್ಮ ನೀಡಿದಾಗ ಸ್ತನಪಾನ ಮಾಡುವುದು ಅತೀ ಅಗತ್ಯವಾಗಿದ್ದು, ಇದರಿಂದ ಅನೇಕ ರೀತಿಯ ಅಪೌಷ್ಟಿಕೆಯಿಂದ ಮಗುವು ಮುಕ್ತವಾಗುತ್ತದೆ ಎಂದು ಹೇಳಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಇದರ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅರವಿಂದ ಬಾಬು ಅವರು ಮಾತನಾಡಿ ರಾಷ್ಟ್ರೀಯ ಪೌಷ್ಠಿಕಾಂಶ ಸಪ್ತಾಹವು ಒಂದು ಅರಿವು ಕಾರ್ಯಕ್ರಮವಾಗಿದ್ದು, ಇದರ ಅಂಗವಾಗಿ ಹಲವಾರು ಯೋಜನೆಗಳಡಿಯಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಹೋಗಲಾಡಿಸುವ ಸಲುವಾಗಿ ಧನ ಸಹಾಯ ಮತ್ತು ಇತರ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.
ಮಕ್ಕಳ ಅಭಿವೃದ್ಧಿ ಅಧಿಕಾರಿ ಅರುಂಧತಿ ಅವರು, ಕೊಡಗಿನಲ್ಲಿ ಪ್ರಕೃತಿಯು ಸಮೃದ್ಧವಾಗಿದೆ. ಹಾಗಾಗಿ ಜಿಲ್ಲೆಯಲ್ಲಿ ದ್ವಿದಳ ಧಾನ್ಯಗಳು, ಸಿರಿಧಾನ್ಯಗಳು ಇತರೇ ಆಹಾರ ಕ್ರಮವನ್ನು ಜನರು ರೂಢಿಸಿಕೊಳ್ಳಬೇಕು ಎಂದರು.
ಉಳಿದಂತೆ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ, ಮಡಿಕೇರಿ ನಗರದ ಕೌನ್ಸಿಲರ್ ಶಾರದಾ ನಾಗರಾಜ್, ಮೇಲ್ವಿಚಾರಕರಾದ ಶೀಲಾ ಮತ್ತು ಸವಿತಾ ಅವರು ಹಾಜರಿದ್ದರು. ಸವಿತಾ ಅವರು ಕಾರ್ಯಕ್ರಮ ನಿರೂಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss