Thursday, August 11, 2022

Latest Posts

BIG NEWS | ‘ಮಹಾ’ ಜನತೆಗೆ ಗುಡ್ ನ್ಯೂಸ್ ಕೊಟ್ಟ ಶಿಂಧೆ ಸರಕಾರ । ಪೆಟ್ರೋಲ್ ಡೀಸೆಲ್​ ಬೆಲೆ ಇಳಿಕೆಗೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಇಂಧನ ಬೆಲೆ ಮಾಡುವುದಾಗಿ ಘೋಷಿಸಿದ್ದ ನೂತನ ಸಿಎಂ ಶಿಂದೆ, ಇದೀಗ ಪೆಟ್ರೋಲ್​, ಡಿಸೇಲ್​​​ ಮೇಲಿನ ತೆರಿಗೆ ಕಡಿತಗೊಳಿಸಿದ್ದಾರೆ. ಕು
ಈ ಮೂಲಕ ಪೆಟ್ರೋಲ್​ ಪ್ರತಿ ಲೀಟರ್​ಗೆ 5 ರೂಪಾಯಿ ಹಾಗೂ ಡೀಸೆಲ್​ ಪ್ರತಿ ಲೀಟರ್​ಗೆ 3 ರೂಪಾಯಿ ಇಳಿಕೆಯಾಗಿದೆ. ಸಚಿವ ಸಂಪುಟದಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಶಿಂದೆ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಅಲಂಕಾರ ಮಾಡಿದ್ದ ಏಕನಾಥ್ ಶಿಂದೆ ರಾಜ್ಯದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ವ್ಯಾಟ್ ದರ ಕಡಿತಗೊಳಿಸುವುದಾಗಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಇಂದು ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದ ವಾಹನ ಸವಾರರಿಗೆ ಬಿಗ್​ ಗಿಫ್ಟ್ ನೀಡಿದ್ದಾರೆ.
ತೈಲ ದರದಲ್ಲಿ ತೆರಿಗೆ ಕಡಿತ ಮಾಡಿರುವುದರಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕವಾಗಿ 6000 ಕೋಟಿ ಹೆಚ್ಚಿನ ಹೊರೆ ಬೀಳಲಿದೆ ಎಂದು ಮುಖ್ಯಮಂತ್ರಿ ಶಿಂದೆ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss