ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್ ಇಂಡಿಯಾ ವಿಮಾನದಲ್ಲಿ ಸುಟ್ಟ ವಾಸನೆಯ ಬಂದ ಕಾರಣ ದುಬೈನ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊಚ್ಚಿಗೆ ವಾಪಾಸ್ ಆಗಿದೆ.
175 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ಎಕ್ಸ್‌ಪ್ರೆಸ್ (IX 411) ವಿಮಾನವು ಆಗಸ್ಟ್ 2 ರಂದು ರಾತ್ರಿ ಕೊಚ್ಚಿಯಿಂದ ಟೇಕ್ ಆಫ್ ಆಗಿತ್ತು.ಆದ್ರೆ ಈ ವೇಳೆ ಪ್ರಯಾಣಿಕರು ಸುಟ್ಟ ವಾಸನೆ ಬರುತ್ತಿದೆ ಎಂದು ದೂರಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಯಿತು.
ಆ ಬಳಿಕ ಎಂಜಿನಿಯರ್ ತಂಡವು ವಿಮಾನವನ್ನು ಪರಿಶೀಲಿಸಿದ್ದು, ಧೂಮಪಾನ ಮಾಡಿದ ಅಥವಾ ತಾಂತ್ರಿಕ ಸಮಸ್ಯೆಯಾದ ಬಗ್ಗೆ ಯಾವುದೇ ಕುರುಹು ಕಂಡುಬಂದಿಲ್ಲ.
ಆದ್ರೆ ಪ್ರಯಾಣಿಕರು ತಂದ ಈರುಳ್ಳಿ ಅಥವಾ ತರಕಾರಿಗಳಿಂದ ಬಂದ ವಾಸನೆಯು ಪ್ರಯಾಣಿಕರಲ್ಲಿ ಗೊಂದಲ ಮೂಡಿಸಿತು ಎಂದು ಪ್ರಾಥಮಿಕ ಪರೀಕ್ಷೆಯಲ್ಲಿ ಕಂಡುಬಂದಿದೆ .