ಕೇಂದ್ರ ಕೊಟ್ಟ ಪರಿಹಾರ ಸಾಕಾಗೋದಿಲ್ಲ, ತುಂಬಾ ಕಮ್ಮಿ ಇದೆ: ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸರ್ಕಾರದಿಂದ 3,454 ಕೋಟಿ ರೂ. ಬರ ಪರಿಹಾರ ಘೋಷಣೆಯಾಗಿದ್ದು ,ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡಿರುವ ಬರ ಪರಿಹಾರ ಮೊತ್ತ ಬಹಳ ಕಡಿಮೆಯಾಗಿದೆ. ನಾವು ಕೇಳಿದ್ದು 18, 172 ಕೋಟಿ ರೂಪಾಯಿ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿನಲ್ಲಿಯೇ ಕೇಳಿದ್ದೆವು. ಕರ್ನಾಟಕದಲ್ಲಿ ಬರದಿಂದ ಆಗಿರುವ ಒಟ್ಟು ಬೆಳೆ ನಷ್ಟ 35 ಸಾವಿರ ಕೋಟಿ ರೂಪಾಯಿಗಳಷ್ಟು. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಎನ್ ಡಿಆರ್ ಎಫ್ ನಿಯಮ ಪ್ರಕಾರ ನಾವು ಕೇಳಿದಷ್ಟು ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬರ ಪರಿಹಾರ ಮೊತ್ತ ಬಿಡುಗಡೆಯ ಬಗ್ಗೆ ಕೇಂದ್ರ ಸಚಿವರುಗಳಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರೆಲ್ಲ ಸುಳ್ಳು ಹೇಳಿದ್ದರು. ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಕೊಟ್ಟಿದೆ ಎಂದರು. ನಂತರ ಚುನಾವಣಾ ನೀತಿ ಸಂಹಿತೆ ಜಾರಿಯಾಯಿತು ಎಂದು ಹೇಳಿ ಪರಿಹಾರ ವಿಳಂಬವಾಗುತ್ತಿದೆ ಎಂದು ಸುಳ್ಳು ಹೇಳಿಕೊಂಡು ಬಂದರು. ಬರಗಾಲಕ್ಕೆ ಬದಲು 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹಣ ಕೇಳುತ್ತಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ನಾವು ಗ್ಯಾರಂಟಿಗಳ ಅನುಷ್ಠಾನಕ್ಕೆ ಕೇಂದ್ರದಿಂದ ಒಂದು ಪೈಸೆನೂ ಕೇಳಿಲ್ಲ, ಕೇಳುವುದೂ ಇಲ್ಲ. ಇಬ್ಬರೂ ಕೇಂದ್ರ ಸಚಿವರು ಸುಳ್ಳು ಹೇಳಿದರು. 2023ರ ಡಿಸೆಂಬರ್ 19ನೇ ತಾರೀಖಿನಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದೆ. ಆಗ ಅವರು ಗೃಹ ಸಚಿವರ ನೇತೃತ್ವದಲ್ಲಿ ಉನ್ನತ ಸಮಿತಿಯಿದೆ, ಅವರ ಗಮನಕ್ಕೆ ತರುತ್ತೇನೆ ಎಂದರು. ಈಗ ನೋಡಿದ್ರೆ ಇಷ್ಟು ಕಡಿಮೆ ಪರಿಹಾರ ಹಣ ನೀಡಿದ್ದಾರೆ. ಇದು ಸಾಲುವುದಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!