ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಸಿಂಗ್ ಬೈಕ್ ಕೊಡಿಸಲಿಲ್ಲ ಎಂದು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದು, ಇದನ್ನು ಕಂಡ ತಾಯಿ ಕೂಡ ರೈಲು ಹಳಿಗೆ ಬಿದ್ದು ಆತ್ಮಹತ್ಯೆಗೆ ಮಾಡಿಕೊಂಡ ದುರ್ಘಟನೆ ಘಟನೆ ರಾಣೆಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ.
ಧನರಾಜ ಸುರೇಶ ನಾಯಕ (18) ಹಾಗೂ ಈತನ ತಾಯಿ ಭಾಗ್ಯಮ್ಮ ನಾಯಕ (43) ಆತ್ಮಹತ್ಯೆ ಮಾಡಿಕೊಂಡವರು. ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಧನರಾಜ ತನಗೆ ರೇಸಿಂಗ್ ಬೈಕ್ ತೆಗೆದುಕೊಳ್ಳಲು ಹಣ ಬೇಕೆಂದು ತಂದೆ- ತಾಯಿ ಬಳಿ ಬೆಳಗ್ಗೆ ಜಗಳ ತೆಗೆದಿದ್ದ.
ಕೂಲಿ ಮಾಡಿಕೊಂಡಿರುವ ತಂದೆ ಸುರೇಶ ಆಯ್ತು ಹೇಗಾದರೂ ಮಾಡಿ ಕೊಡಿಸುತ್ತೇನೆ ಎಂದು ಕೆಲಸಕ್ಕೆ ಹೋಗಿದ್ದರು. ನಂತರ ತಾಯಿ ಮಗನಿಗೆ ಬುದ್ದಿಮಾತು ಹೇಳಿದ್ದರು. ತಾಯಿ ಪಕ್ಕದ ಮನೆಗೆ ಹೋಗಿದ್ದ ವೇಳೆ ಮಧ್ಯಾಹ್ನ ಧನರಾಜ ಅಡುಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಾಯಿ ಮನೆಗೆ ಬರುತ್ತಿದ್ದಂತೆ ಮಗನ ಸ್ಥಿತಿ ಕಂಡು ದಿಗ್ಬ್ರಾಂತರಾಗಿದ್ದಾರೆ. ಇದರಿಂದ ದುಃಖಿತರಾಗಿ ಕರೂರ ರೈಲು ನಿಲ್ದಾಣದ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕುಮಾರಪಟ್ಟಣ ಪಿಎಸ್ಐ ಪ್ರವೀಣ ವಾಲೀಕಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.