ಹೊಸದಿಗಂತ ವರದಿ ಚಿತ್ರದುರ್ಗ:
ಕುಡಿಯಲು ಹಣ ನೀಡಲಿಲ್ಲ, ಸರಿಯಾಗಿ ಊಟ ಹಾಕುವುದಿಲ್ಲ ಎಂದು ಸಿಟ್ಟಿಗೆದ್ದ ಮಗ ಹೆತ್ತ ತಾಯಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆಗೈದಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ.
ಮಗನಿಂದ ಕೊಲೆಯಾದ ತಾಯಿಯನ್ನು ಅಂಜಿನಮ್ಮ ( 58) ಎಂದು ಗುರುತಿಸಲಾಗಿದ್ದು. ಇವರ ಮಗ
ಶಿವಾರೆಡ್ಡಿ (35) ಕುಡಿತದ ಚಟಕ್ಕೆ ಬಲಿಯಾಗಿದ್ದ. ಕುಡಿಯಲು ಹಣ ನಿಒಡುವಂತೆ ಪ್ರತಿನಿತ್ಯ ತನ್ನ ತಾಯಿಯನ್ನು ಪೀಡಿಸುತ್ತಿದ್ದ.
ಕುಡಿಯಲು ಹಣ ನೀಡಲಿಲ್ಲ ಎಂದು ಸಿಟ್ಟಿಗೆದ್ದ ಶಿವಾರೆಡ್ಡಿ ಚಾಕುವಿನಿಂದ ಇರಿದು ತಾಯಿಯನ್ನು ಕೊಂದಿದ್ದಾನೆ. ರಾಂಪುರ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿ ಶಿವಾರೆಡ್ಡಿಯನ್ನ ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ PSI ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲಿಸಿದ್ದಾರೆ