ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಸ್ಫೋಟದ ಸದ್ದು: ಸ್ಥಳಕ್ಕೆ ದೌಡಾಯಿಸಿದ ಭದ್ರತಾ ಪಡೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕಳೆದ ರಾತ್ರಿ ಸ್ಫೋಟ ಸಂಭವಿಸಿದೆ.
ಪ್ರಾಥಮಿಕ ತನಿಖೆಗಳಲ್ಲಿ ಗ್ರೆನೇಡ್ ಎಸೆತದಿಂದ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಘಟನೆಯಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ ಎಮದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸೇನಾ ಸಿಬ್ಬಂದಿ, ಪೊಲೀಸ್ ಪಡೆ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ದೌಡಾಯಿಸಿದ್ದು, ಮೊಕ್ಕಾಂ ಹೂಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಮೇಲ್ನೋಟಕ್ಕೆ ಇದೊಂದು ಭಯೋತ್ಪಾದನಾ ಕೃತ್ಯ ಎಂದು ಶಂಕಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!