ಹೊಸದಿಗಂತ ವರದಿ ಬನವಾಸಿ:
ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯತಿ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಶಿರಸಿ ತಹಶೀಲ್ದಾರ್ ಶ್ರೀಧರ ಮುಂದಲಮನಿ ಚಾಲನೆ ನೀಡಿದರು.
ಐತಿಹಾಸಿಕ ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ದೀಪ ಬೆಳಗಿಸಿ ಮಾತನಾಡಿದರು. ಅಧ್ಯಕ್ಷತೆವಹಿಸಿದ್ದ ಗ್ರಾಪಂ ಅಧ್ಯಕ್ಷೆ ತುಳಸಿ ಆರೇರ ಮಾತನಾಡಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಜಶೇಖರ ಒಡೆಯರ್, ಕಾರ್ಯದರ್ಶಿ ಪ್ರಕಾಶ ಬಂಗ್ಲೆ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅನಿಲ್ ಕುಮಾರ್, ಉಪ ತಹಶೀಲ್ದಾರ್ ನಾಗರಾಜ್ ಬೊರಕರ್, ಪ್ರಾಚಾರ್ಯ ಎಂ.ಕೆ. ನಾಯ್ಕ್, ಇಸಿಓ ಸತೀಶ್ ಮಡಿವಾಳ, ಕಂದಾಯ ನಿರೀಕ್ಷಕಿ ಮಂಜುಳಾ ನಾಯ್ಕ್ ಮತ್ತಿತರರು ಇದ್ದರು.