ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಿಬಂದಿದ್ದು, ಜಯಪುರ ಠಾಣಾ ವ್ಯಾಪ್ತಿಯ ಮನೆಗಳಿಗೆ ಮನೆಗಳಿಗೆ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮತ್ತು ನಕ್ಸಲ್ ನಿಗ್ರಹ ಪಡೆ ಎಸ್ಪಿ ಜಿತೇಂದ್ರ ನೇತೃತ್ವದಲ್ಲಿ ತನಿಖೆ ಮಾಡಲಾಗಿದೆ.
ಅರಣ್ಯ ಒತ್ತುವರಿ ಮತ್ತು ಕಸ್ತೂರಿ ರಂಗನ್ ವರದಿ ಸಂಬಂಧ ಕೊಪ್ಪ ತಾಲೂಕಿನ ಯಡಗುಂದಿ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಗ್ರಾಮದ ಪ್ರತಿ ಮನೆಯಲ್ಲೂ ಪೊಲೀಸರಿಂದ ಶೋಧ ಮಾಡಲಾಗಿದೆ. ಗ್ರಾಮಸ್ಥರಿಂದ ಎಎನ್ಎಫ್ ಮತ್ತು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.
ಇನ್ನು ಕೆರೆಕಟ್ಟೆ, ಕುದುರೆಮುಖ, ತನಿಕೋಡು ಚೆಕ್ಪೋಸ್ಟ್ ಭಾಗದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದು, ಉಡುಪಿ-ಚಿಕ್ಕಮಗಳೂರು ಗಡಿ ಭಾಗದಲ್ಲಿ ಸಿಬ್ಬಂದಿಗಳು ಫುಲ್ ಅಲರ್ಟ್ ಆಗಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಈದು ಗ್ರಾಮದಲ್ಲಿ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಮಾಡಿದ್ದರು.