ಹೊಸದಿಂಗತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ದೇಶದ ಸಾವಿರಾರು ಗಣ್ಯರು, ಸಾಧುಸಂತರು, ಸಾಧಕರು ಮತ್ತು ಕರ ಸೇವಕರನ್ನು ಆಹ್ವಾನಿಸಲಾಗಿದೆ.
ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಕೇಶವ್ ಮಹಾರಾಜ್ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವುದು ನನ್ನ ಈ ವರ್ಷದ ಪ್ರಮುಖ ಗುರಿ ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಸ್ಪಿನ್ನರ್ ಕೇಶವ್ ಮಹಾರಾಜ್ ಅಯೋಧ್ಯೆಯ ಶ್ರೀರಾಮ ಮಂದಿರದ ಲೋಕಾರ್ಪಣೆಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದರು. ಅವರು ಆಂಜನೇಯನ ಪರಮ ಭಕ್ತರು ಮತ್ತು ಈ ಸಂದರ್ಭದಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವುದು ಅವರ ಪ್ರಮುಖ ಗುರಿಯಾಗಿದೆ ಎಂದರು.