ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಮೆಗಾ ಹರಾಜಿನ ಎರಡನೇ ದಿನವಾದ ಇಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಮೊದಲ ಖರೀದಿಯಾಗಿ ಸ್ಪಿನ್ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಕೃನಾಲ್ ಪಾಂಡ್ಯ ಖರೀದಿಗಾಗಿ ಬೆಂಗಳೂರು ಮತ್ತು ರಾಜಸ್ಥಾನ ನಡುವೆ ಹಣಾಹಣಿ ಏರ್ಪಟ್ಟಿತ್ತು. ಅಂತಿಮವಾಗಿ 5.75 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಇನ್ನು ಐಪಿಎಲ್‌ನಲ್ಲಿ 127 ಪಂದ್ಯಗಳನ್ನು ಆಡಿರುವ ಕೃನಾಲ್ 132.82 ರ ಸ್ಟ್ರೈಕ್ ರೇಟ್ ಹಾಗೂ 22.56ರ ಸರಾಸರಿಯೊಂದಿಗೆ 1,647 ರನ್ ಕಲೆಹಾಕಿದ್ದಾರೆ.