ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ’ ಎಂದು ಪ್ರಧಾನಿ ಮೋದಿ ಹೆಸರಿಟ್ಟಿದ್ದಾರೆ. ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳ ಜೊತೆ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ʻಚಂದ್ರಯಾನ -3ರ ಲ್ಯಾಂಡರ್ ಇಳಿದ ಸ್ಥಳವನ್ನು ಇನ್ನು ಮುಂದೆ ‘ಶಿವಶಕ್ತಿ’ ಎಂದು ಕರೆಲಾಗುವುದಾಗಿ ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಮಿಷನ್ ಕಂಟ್ರೋಲ್ ಕಾಂಪ್ಲೆಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
ಚಂದ್ರಯಾನ-3 ಯಶಸ್ಸಿಗೆ ಮಹಿಳಾ ವಿಜ್ಞಾನಿಗಳ ಕೊಡುಗೆಯೂ ಇದೆ ಎಂದು ಈ ಸಂದರ್ಭದಲ್ಲಿ ಮಹಿಳಾ ವಿಜ್ಞಾನಿಗಳನ್ನು ಕೊಂಡಾಡಿದರು.
“ಮಹಿಳಾ ವಿಜ್ಞಾನಿಗಳು ಚಂದ್ರಯಾನ 3 ರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ..ಈ ‘ಶಿವಶಕ್ತಿ’ ಪಾಯಿಂಟ್ ಮುಂಬರುವ ಪೀಳಿಗೆಗೆ ವಿಜ್ಞಾನವನ್ನು ಜನರ ಕಲ್ಯಾಣಕ್ಕಾಗಿ ಬಳಸಲು ಪ್ರೇರೇಪಿಸುತ್ತದೆ. ಜನರ ಕಲ್ಯಾಣವೇ ನಮ್ಮ ಪರಮೋಚ್ಚ ಬದ್ಧತೆ.” ಎಂದರು.
#WATCH | Prime Minister Narendra Modi meets women scientists of the ISRO team involved in Chandrayaan-3 Mission at ISRO Telemetry Tracking & Command Network Mission Control Complex in Bengaluru pic.twitter.com/Ugwk2WRzsw
— ANI (@ANI) August 26, 2023
ಕೆಲವೇ ವರ್ಷಗಳಲ್ಲಿ, ಭಾರತದ ಬಾಹ್ಯಾಕಾಶ ಉದ್ಯಮವು $8 ಬಿಲಿಯನ್‌ನಿಂದ $16 ಬಿಲಿಯನ್‌ಗೆ ಬೆಳೆಯಲಿದೆ ಎಂದು ತಜ್ಞರ ಅಭಿಪ್ರಾಯವನ್ನು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು.