Wednesday, November 5, 2025

ಬಿಹಾರ ವಿಧಾನಸಭಾ ಚುನಾವಣೆಗೆ ಅಖಾಡ ರೆಡಿ: ನಾಳೆ ಮೊದಲ ಹಂತದ ಮತದಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಬಿಹಾರ ವಿಧಾನಸಭಾ ಚುನಾವಣೆಗೆ ಅಖಾಡ ರೆಡಿಯಾಗಿದ್ದು, ನಾಳೆ (ನವೆಂಬರ್ 6) ಬಿಹಾರದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.

ಗುರುವಾರ ನಡೆಯಲಿರುವ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಬಿಹಾರ ಸಜ್ಜಾಗಿದ್ದು, 3.75 ಕೋಟಿ ಮತದಾರರು 1,314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಚುನಾವಣಾ ಫಲಿತಾಂಶಗಳು ನವೆಂಬರ್ 14ರಂದು ಪ್ರಕಟವಾಗುತ್ತವೆ.

ಈಗಾಗಲೇ ಚುನಾವಣಾ ಪ್ರಚಾರ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆರ್​ಜೆಡಿ ನಾಯಕ ತೇಜಸ್ವಿ ಯಾದವ್, ಜೆಡಿಯು ನಾಯಕ ನಿತೀಶ್ ಕುಮಾರ್ ಮುಂತಾದವರು ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.

ಮೊದಲ ಹಂತದ ಮತದಾನದಲ್ಲಿ 121 ಕ್ಷೇತ್ರಗಳಲ್ಲಿ 45,341 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ಹಲವಾರು ಪ್ರಮುಖ ರಾಜಕೀಯ ವ್ಯಕ್ತಿಗಳು ನಿರ್ಣಾಯಕ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.

ಎನ್‌ಡಿಎಯಲ್ಲಿ ಭಾರತೀಯ ಜನತಾ ಪಕ್ಷ, ಜನತಾದಳ (ಯುನೈಟೆಡ್), ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಸೇರಿವೆ.

ರಾಷ್ಟ್ರೀಯ ಜನತಾ ದಳದ ನೇತೃತ್ವದ ಮಹಾಘಟಬಂಧನ್‌ನಲ್ಲಿ ಕಾಂಗ್ರೆಸ್ ಪಕ್ಷ, ದೀಪಂಕರ್ ಭಟ್ಟಾಚಾರ್ಯ ನೇತೃತ್ವದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) (ಸಿಪಿಐ-ಎಂಎಲ್), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) (ಸಿಪಿಎಂ) ಮತ್ತು ಮುಖೇಶ್ ಸಹಾನಿ ಅವರ ವಿಕಾಸಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಸೇರಿವೆ.

error: Content is protected !!