ಹೊಸದಿಗಂತ ಡಿಜಿಟಲ್ ಡೆಸ್ಕ್:
IPL 2025 ಸೀಸನ್-18 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಮೊದಲ ಕ್ವಾಲಿಫೈಯರ್ನಲ್ಲಿ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ಗೇರಿದರೆ, ಇದೀಗ ದ್ವಿತೀಯ ಕ್ವಾಲಿಫೈಯರ್ನಲ್ಲಿ ಕಣಕ್ಕಿಳಿಯಲು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸಜ್ಜಾಗಿದೆ.
ಇಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೇರಲಿದೆ. ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡದ ಎದುರಾಳಿಯಾಗಿ ಒಂದು ತಂಡ ಕಣಕ್ಕಿಳಿಯುವುದು ಖಚಿತ. ಮಾಜಿ ಆಟಗಾರ ಡೇವಿಡ್ ವಾರ್ನರ್, ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ತಿಳಿಸಿದ್ದಾರೆ.
ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡೇವಿಡ್, ನನ್ನ ಪ್ರಕಾರ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿ ಹಿಡಿಯಲಿದೆ ಎಂದಿದ್ದಾರೆ. ಜೋಶ್ ಹೇಝಲ್ವುಡ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
9 ವರ್ಷಗಳ ಬಳಿಕ ಮತ್ತೊಮ್ಮೆ ಫೈನಲ್ಗೇರುವಲ್ಲಿ ಆರ್ಸಿಬಿ ಯಶಸ್ವಿಯಾಗಿದೆ. ಹೀಗಾಗಿಯೇ ಈ ಬಾರಿಯ ಐಪಿಎಲ್ನಲ್ಲಿ ಟ್ರೋಫಿ ಎತ್ತಿ ಹಿಡಿಯುವ ಭರವಸೆ ಎಲ್ಲ ಅಭಿಮಾನಿಗಳಿಗೂ ಇದೆ.