ಹೊಸದಿಗಂತ ಡಿಜಿಟಲ್ ಡೆಸ್ಕ್:
IPL 28ನೇ ಪಂದ್ಯದಲ್ಲಿ RCB ಮತ್ತು RR ತಂಡಗಳು ಮುಖಾಮುಖಿಯಾಗಲಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಆರ್ಸಿಬಿ ಗ್ರೀನ್ ಜೆರ್ಸಿ ಯಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ಈ ವಿಚಾರ ಇದೀಗ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ.
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಗ್ರೀನ್ ಜೆರ್ಸಿ ಅದೃಷ್ಟವಲ್ಲ ಎಂಬ ಮಾತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗ್ರೀನ್ ಜೆರ್ಸಿಯಲ್ಲಿ ಈವರೆಗೆ 14 ಪಂದ್ಯಗಳನ್ನಾಡಿದ್ದು, ನಾಲ್ಕು ಬಾರಿ ಮಾತ್ರ ಗೆಲುವು ಸಾಧಿಸಿದೆ. ಇನ್ನುಳಿದ 8 ಪಂದ್ಯಗಳಲ್ಲಿ ಸೋತಿದೆ.
ಇದೀಗ 16ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲು RCB ತಂಡ ಸಜ್ಜಾಗಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್ಸಿಬಿ ಗ್ರೀನ್ ಜೆರ್ಸಿ ಯಲ್ಲಿ ಗೆಲುವು ಸಾಧಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.