ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಎಲ್ಲರಿಗೂ ಸಲ್ಲುವ ಕವಿ ಎಂದೇ ಪ್ರಸಿದ್ಧರಾಗಿದ್ದ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಡಾ. ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವಾರು ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿ ಕನ್ನಡಿಗರ ಮನೆ ಮಾತಾಗಿದ್ದರು. ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ತಿಳಿಸಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ಸಿಎಂ ತಿಳಿಸಿದ್ದಾರೆ.