Thursday, August 11, 2022

Latest Posts

ನಾಳೆಯಿಂದ ಎರಡನೇ ಸುತ್ತಿನ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನಾಳೆಯಿಂದ (ಸೋಮವಾರ) ಎರಡನೇ ಸುತ್ತಿನ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ.
ಜನವರಿ 29 ರಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರ ಭಾಷಣದೊಂದಿಗೆ ಆರಂಭವಾಗಿದ್ದ ಮೊದಲ ಹಂತದ ಬಜೆಟ್ ಅಧಿವೇಶನ ಫೆಬ್ರವರಿ 29 ರಂದು ಮುಕ್ತಾಯಗೊಂಡಿತ್ತು.ಈ ವೇಳೆ ಫೆ. 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2021-2022ನೇ ಸಾಲಿನ ಕೇಂದ್ರ ಬಜೆಟ್​ ಮಂಡಿಸಿದ್ದರು.
ಇದೀಗ ನಾಳೆಯಿಂದ 2ನೇ ಸುತ್ತಿನ ಅಧಿವೇಶನ ಶುರುವಾಗಲಿದ್ದು, ಏಪ್ರಿಲ್ 8ಕ್ಕೆ ಮುಕ್ತಾಯಗೊಳ್ಳಲಿದೆ. ಬೆಳಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ರಾಜ್ಯಸಭಾ ಹಾಗೂ ಸಂಜೆ 4 ರಿಂದ ರಾತ್ರಿ 10 ರವರೆಗೆ ಲೋಕಸಭಾ ಕಲಾಪ ನಡೆಯಲಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss