CBI ಮುಕ್ತ ತನಿಖೆಗೆ ಬ್ರೇಕ್ ಹಾಕಿದ ರಾಜ್ಯ ಕಾಂಗ್ರೆಸ್ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್ ಸರಕಾರ ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರಿಯ ತನಿಖಾ ದಳ (CBI) ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ಕ್ಯಾಬಿನೆಟ್‌ ಸಭೆಯಲ್ಲಿ ನಿರ್ಧರಿಸಿದೆ.

ನಗರದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 28 ವಿಷಯಗಳನ್ನ ಪರಿಶೀಲಿಸಲಾಯಿತು. ಎರಡು ವಿಷಯ ಹೊರತು ಪಡಿಸಿ ಉಳಿದಿದ್ದೆಲ್ಲಾ ವಿಷಯಗಳ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಈ ಪೈಕಿ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ಕ್ಯಾಬಿನೆಟ್ ನಿರ್ಧಾರ ತೆಗೆದುಕೊಡಿದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐಗೆ ಮುಕ್ತ ಅವಕಾಶವಿತ್ತು. ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲೀಶ್‌ಮೆಂಟ್ ಆಕ್ಟ್ , 1946 ಅಡಿ ಅವಕಾಶ ಇತ್ತು. ಈಗ ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ಹಿಂಪಡೆಯಲು ತೀರ್ಮಾನಿಸಿದೆ.

ಕ್ಯಾಬಿನೆಟ್‌ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ರಾಜ್ಯ ಕಾನೂನು ಸಚಿವ ಹೆಚ್‌.ಕೆ ಪಾಟೀಲ್‌ , ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧರಿಸಿದೆ ಎಂದು ತಿಳಿಸಿದರು.

ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಯಾರಾದರೂ ದೂರು ನೀಡಿದರೆ ಮುಕ್ತವಾಗಿ ಸಿಬಿಐ ತನಿಖೆ ನಡೆಸಬಹುದಿತ್ತು. ಅದಕ್ಕೆ ಕರ್ನಾಟಕ ಸರ್ಕಾರವೇ ಅವಕಾಶ ಮಾಡಿಕೊಟ್ಟಿತ್ತು. ಈಗ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ಕ್ಯಾಬಿನೆಟ್ ನಿರ್ಧಾರ ಮಾಡಿದೆ ಎಂದು ತಿಳಿಸಿದ್ದಾರೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!