ಜೂನ್ 13ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳು ಜೂನ್ 13ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ವಾಯವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ರಂದು ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಪದವೀಧರ ಮತ್ತು ಶಿಕ್ಷಕರ ಪರಿಷತ್ ಚುನಾವಣೆಯು ನಡೆಯಲಿದೆ. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯು ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ನಡೆಯಲಿದೆ. ಶಿಕ್ಷಕರ ಪಶ್ಚಿಮ ಕ್ಷೇತ್ರದ ಚುನಾವಣೆಯು ಧಾರವಾಡ, ಹಾವೇರಿ,ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ.

ಹೀಗಾಗಿ ಜೂನ್ 13ರಂದು ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು ಮತ್ತು ಇತರ ಬ್ಯಾಂಕ್‌ಗಳು ಮತ್ತು ಖಾಸಗಿ ಕಾರ್ಖಾನೆಗಳಿಗೆ ವಿಶೇಷ ರಜೆ ಘೋಷಿಸಲಾಗಿದೆ.

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ:

ಇನ್ನು ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರವೇಶ ದಿನಾಂಕವನ್ನು ಶಿಕ್ಷಣ ಇಲಾಖೆ ವಿಸ್ತರಿಸಿದೆ. ಎಸ್‌ಎಸ್‌ಎಲ್‌ಸಿ ಪ್ರವೇಶ ಫಲಿತಾಂಶದಿಂದ ವಿದ್ಯಾರ್ಥಿಗಳು ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು ಎಂಬ ಗೊಂದಲದಲ್ಲಿದ್ದಾರೆ. ಜೊತೆಗೆ CBSE ಮತ್ತು ICSE 10ನೇ ತರಗತಿಯ ಫಲಿತಾಂಶ ಪ್ರಕಟವಾಗಿಲ್ಲ. ಇದರಿಂದಾಗಿ ಪ್ರಥಮ ಪಿಯುಸಿ ಪ್ರವೇಶ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

2022-23ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ಪ್ರವೇಶ ದಿನಾಂಕವು ಯಾವುದೇ ದಂಡ ಶುಲ್ಕವಿಲ್ಲದೆ ಜೂನ್‌ 15 ಮತ್ತು ದಂಡದೊಂದಿಗೆ ಜೂನ್ 30 ಕೊನೆಯ ಆಗಿತ್ತು. ಆದರೆ CBSE ಮತ್ತು ICSC ಬೋರ್ಡ್‌ಗಳಲ್ಲಿ ಫಲಿತಾಂಶಗಳು ವಿಳಂಬವಾಗುತ್ತಿರುವುದರಿಂದ, ಕಾಲೇಜು ಪ್ರವೇಶ ದಿನಾಂಕವನ್ನು ವಿಸ್ತರಿಸಲು ಅನೇಕ ಪೋಷಕರು ಮತ್ತು ವಿದ್ಯಾರ್ಥಿಗಳು ಶಿಕ್ಷಣ ಮಂಡಳಿಗೆ ವಿನಂತಿಸಿದ್ದರು. ಹೀಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಪ್ರವೇಶ ದಿನಾಂಕವನ್ನು ದಂಡವಿಲ್ಲದೆ ಜೂನ್‌ 16 ರಿಂದ ಜುಲೈ 11 ರವರೆಗೆ ವಿಸ್ತರಿಸಿ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!