ಐಪಿಎಸ್‌ ಅಧಿಕಾರಿ ಡಿ.ರೂಪಾಗೆ 7 ತಿಂಗಳ ಬಳಿಕ ಹುದ್ದೆ ನಿಯೋಜನೆ ಮಾಡಿದ ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಬಳಿಕ ಇದೀಗ 7 ತಿಂಗಳ ಬಳಿಕ ಐಪಿಎಸ್‌ ಅಧಿಕಾರಿ ಡಿ.ರೂಪಾಗೂ (D.Roopa Moudgil) ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ. ಆಂತರಿಕ ಭದ್ರತಾ ವಿಭಾಗದ ಐಜಿಯಾಗಿ ರೂಪಾರನ್ನ ನಿಯೋಜಿಸಲಾಗಿದೆ.

ರೋಹಿಣಿ ಸಿಂಧೂರಿ ಮತ್ತು ರೂಪಾ ಮೌದ್ಗಿಲ್‌ ಪರಸ್ಪರ ಕಿತ್ತಾಡಿಕೊಂಡಿದ್ದರು. ಆಗ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಆದರೆ ಯಾವುದೇ ಹುದ್ದೆಯನ್ನು ನೀಡಿರಲಿಲ್ಲ. ಇದೀಗ7 ತಿಂಗಳ ಬಳಿಕ ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಗೆಜೆಟಿಯರ್‌ ಡಿಪಾರ್ಟ್‌ಮೆಂಟ್‌ನ ಮುಖ್ಯ ಸಂಪಾದಕರನ್ನಾಗಿ ನಿಯೋಜಿಸಲಾಗಿದೆ.

ಅದೇ ರೀತಿ ಡಿ.ರೂಪಾ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!