75 ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳೆಂದು ಘೋಷಿಸಿದ ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯದಲ್ಲಿ ಪ್ರತಿ ಜಿಲ್ಲೆಯ 2 ಶಾಲೆಗಳಂತೆ 75 ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ.
ಜನವರಿ 23ರಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ 75 ಶಾಲೆಗಳಲ್ಲಿ ಎನ್.ಸಿ.ಸಿ ಘಟಕಗಳನ್ನು ಸ್ಥಾಪಿಸಿ, ಈ ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳೆಂದು ಘೋಷಿಸಲು ತೀರ್ಮಾನಿಸಲಾಗಿತ್ತು. ಅದರಂತೆ ಈ ಆದೇಶ ಹೊರಡಿಸಲಾಗಿದೆ.
ನೇತಾಜಿ ಅಮೃತ ಶಾಲೆಗಳೆಂದು ಘೋಷಿಸಲ್ಪಟ್ಟ ಪ್ರತಿ ಶಾಲೆಯಿಂದ 100 ವಿದ್ಯಾರ್ಥಿಗಳಂತೆ ಒಟ್ಟು 7500 ವಿದ್ಯಾರ್ಥಿಗಳಿಗೆ ಎನ್ ಸಿ ಸಿ ತರಬೇತಿಯನ್ನು ನೀಡಲು ಅನುಕೂಲವಾಗುವಂತೆ ಅದಕ್ಕೆ ತಗಲುವ ವೆಚ್ಚ ಒಬ್ಬ ವಿದ್ಯಾರ್ಥಿಗೆ ರೂ.12,000 ದಂತೆ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!