ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಕ್ಯಾಪ್ಟನ್ ಪ್ರಾಂಜಲ್ (Capt Pranjal) ಕುಟುಂಬದವರಿಗೆ ಮಂಗಳವಾರ 50 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಯಿತು.
25 ಲಕ್ಷ ರೂಪಾಯಿಗಳ ಚೆಕ್‌ಅನ್ನು ಎಂಪಿ ಪ್ರಾಂಜಲ್ ಅವರ ತಂದೆ-ತಾಯಿಗೆ ನೀಡಿದ್ದರೆ, ಇನ್ನು 25 ಲಕ್ಷ ರೂಪಾಯಿಯ ಚೆಕ್‌ಅನ್ನು ಪ್ರಾಂಜಲ್ ಅವರ ಪತ್ನಿ ಅದಿತಿ ಅವರಿಗೆ ನೀಡಲಾಗಿದೆ.
ರಜೌರಿ ಎನ್‌ಕೌಂಟರ್‌ನಲ್ಲಿ ಎಂವಿ ಪ್ರಾಂಜಲ್ ಅಸುನೀಗಿದ ಬೆನ್ನಲ್ಲಿಯೇ ಸಿಎಂ ಸಿದ್ಧರಾಮಯ್ಯ 50 ಲಕ್ಷ ರೂಪಾಯಯಿ ಪರಿಹಾರ ಘೋಷಣೆ ಮಾಡಿದ್ದರು. ಆದರೆ, ಈ ಘೋಷಣೆ ಮಾಡಿ 10ಕ್ಕೂ ಅಧಿಕ ದಿನ ಕಳೆದರೂ, ಸರ್ಕಾರ ಹಣ ಪಾವತಿ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಕೂಡ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಹಣ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು. ಈಗ ಸಿದ್ದರಾಮಯ್ಯ ಅವರ ಸರ್ಕಾರ ಹಣ ಬಿಡುಗಡೆ ಮಾಡಿದೆ.
‘ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ. ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ’ ಎಂದು ಕರ್ನಾಟಕ ಸಿಎಂ ಅವರ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಅದರ ಜೊತೆಗೆ ಪ್ರಾಂಜಲ್ ಕುಟುಂಬಕ್ಕೆ ನೀಡಿದ ಚೆಕ್‌ನ ಚಿತ್ರಗಳನ್ನು ಕೂಡ ಹಂಚಿಕೊಳ್ಳಲಾಗಿದೆ.
ಮಂಗಳವಾರ ಜಿಗಣಿಯ ನಂದನವನ ಲೇಔಟ್‌ಗೆ ಆಗಮಿಸಿದ ಜಿಲ್ಲಾಧಿಕಾರಿ ದಯಾನಂದ್, ಹುತಾತ್ಮ ಪ್ರಾಂಜಲ್ ಕುಟುಂಬಕ್ಕೆ ಪರಿಹಾರದ ಚೆಕ್ ನೀಡಿದರು. ಈ ವೇಳೆ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಕೂಡ ಹಾಜರಿದ್ದರು.