ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಆಸ್ತಿಗಳಿಗೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಮತ್ತೊಂದೆಡೆ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅವಕಾಶ ನೀಡಿರುವುದರ ವಿರುದ್ಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ.
ಇದರೊಂದಿಗೆ ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ಯತ್ನಾಳ್ ವಿರುದ್ಧ ರಾಜ್ಯ ಸರ್ಕಾರವೂ ಸಹ ಕಾನೂನು ಸಮರ ಸಾರಿದೆ.
ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿದೆ.
ಮತ್ತೊಂದೆಡೆ, ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅವಕಾಶ ನೀಡಿರುವುದರ ವಿರುದ್ಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಯತ್ನಾಳ್ ಒಡೆಯನದ ಕಾರ್ಖಾನೆ ನಿಯಮಗಳ ಉಲ್ಲಂಘಿಸಿದೆ ಎಂದು ಮೇಲ್ಮನವಿ ಅರ್ಜಿಯಲ್ಲಿ ಪಿಸಿಬಿ ಆರೋಪಿಸಿದೆ.