ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಕೋಟಿ ರೂ.ನಿಗದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಕಾಮಗಾರಿಗೆ ರಾಜ್ಯ ಸರ್ಕಾರ 50 ಕೋಟಿ ರೂ. ನಿಗದಿ ಮಾಡಿದ್ದು. ಶೀಘ್ರ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ರೋಪ್ ವೇ ಯೋಜನೆಗೆ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಲಾಗುವುದು. 10 ವರ್ಷಗಳ ಹಿಂದೆಯೇ ಏಕಾಶಿಲಾ ಬೆಟ್ಟಕ್ಕೆ ರೋಪ್ ವೇ ಯೋಜನೆಗೆ 9 ಎಕರೆ ಜಾಗ ಮೀಸಲಿಡಲಾಗಿತ್ತು. ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ರೋಪ್ ವೇ ಕಾಮಗಾರಿಗಳಿಗಾಗಿ ಪ್ರತ್ಯೇಕ ಪ್ರಾಧಿಕಾರ ಸ್ಥಾಪಿಸಲಾಗಿದ್ದು. ಆ ಇಲಾಖೆಯ ಮಾನದಂಡಗಳಂತೆ ಕಾಮಗಾರಿ ನಿರ್ವಹಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!