ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು ಈ ವೇಳೆ ರೋಹಿಣಿ ಸಿಂಧೂರಿ ಅವರಿಗೂ ಮತ್ತೆ ಪೋಸ್ಟಿಂಗ್ ದೊರಕಿದೆ.
ಐವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ, ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ರಾಜ್ಯ ಸರ್ಕಾರ ಇಂದು ಆದೇಶ ಮಾಡಿದ್ದೂ, ಈ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಗೆಜೆಟಿಯರ್ ಚೀಫ್ ಎಡಿಟರ್ ಆಗಿ ನೇಮಕ ಮಾಡಲಾಗಿದೆ.
ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ಮಧ್ಯೆ ನಡೆದಿದ್ದ ಕಿತ್ತಾಟದಿಂದ ಇಬ್ಬರೂ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಲಾಗಿತ್ತು. ಅದೇ ರೀತಿ ರೋಹಿಣಿ ಸಿಂಧೂರಿ ಅವರಿಗೆ ಇಷ್ಟು ದಿನ ಕಾಲ ಅಧಿಕಾರ ಇರ್ಲಿಲ್ಲ. ಈಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಗೆಜೆಟಿಯರ್ ಚೀಫ್ ಎಡಿಟರ್ ಆಗಿ ನೇಮಕ ಮಾಡಲಾಗಿದೆ.