‘5 ವರ್ಷಗಳಲ್ಲಿ ಆರ್ಥಿಕತೆಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಭೋಪಾಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ದೇಶಿಸಿ ಮಾತನಾಡಿದರು. ಮುಂದಿನ 5 ವರ್ಷಗಳಲ್ಲಿ ರಾಜ್ಯದ ಆರ್ಥಿಕತೆಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

ಪ್ರಧಾನಿ ಮೋದಿಯವರ ಸಮ್ಮುಖದಲ್ಲಿ ಮಧ್ಯಪ್ರದೇಶದ ಜಾಗತಿಕ ಹೂಡಿಕೆದಾರರ ಶೃಂಗಸಭೆ ಆಯೋಜಿಸುತ್ತಿರುವುದು ನಮ್ಮ ಸೌಭಾಗ್ಯ ಎಂದ ಸಿಎಂ ಮೋಹನ್ ಯಾದವ್, ಮಧ್ಯಪ್ರದೇಶದಲ್ಲಿ ಅಭಿವೃದ್ಧಿ ಮತ್ತು ಹೂಡಿಕೆಗೆ ದೊಡ್ಡ ಅವಕಾಶಗಳಿವೆ. 2047 ರ ವೇಳೆಗೆ ಮತ್ತು 35 ಟ್ರಿಲಿಯನ್ ಡಾಲರ್ ಗುರಿಯನ್ನು ಸಾಧಿಸಲು ಮಧ್ಯಪ್ರದೇಶ ರಾಜ್ಯವು ಮುಂದಿನ 5 ವರ್ಷಗಳಲ್ಲಿ ಆರ್ಥಿಕತೆಯನ್ನು ದ್ವಿಗುಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲು ಬದ್ಧವಾಗಿದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡಲು 18 ಹೊಸ ನೀತಿಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!