ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ಮುಂದಾದ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

ಡೆಂಗ್ಯೂ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಲಾಗುತ್ತದೆ. ತಲಾ 300 ರೂ.ನಂತೆ ಒಟ್ಟು 600 ರೂ. ದರವನ್ನು ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಈ ಸಂದರ್ಭವನ್ನು ಬಳಸಿಕೊಂಡು ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಲು ಮುಂದಾಗಿದೆ.

ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಂಗಳವಾರ ತಿಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!